Connect with us

Dvgsuddi Kannada | online news portal | Kannada news online

ದಾವಣಗೆರೆ: ಆನಗೋಡು ಬಳಿ ನಡೆದಿದ್ದ ಮೂವರು ಯುವಕರ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್; ಅದು, ಅಪಘಾತವಲ್ಲ ಕೊಲೆ; ಪ್ರಕರಣದ ಆರೋಪಿಗಳ ಬಂಧನ

IMG 20230215 WA0028

ದಾವಣಗೆರೆ

ದಾವಣಗೆರೆ: ಆನಗೋಡು ಬಳಿ ನಡೆದಿದ್ದ ಮೂವರು ಯುವಕರ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್; ಅದು, ಅಪಘಾತವಲ್ಲ ಕೊಲೆ; ಪ್ರಕರಣದ ಆರೋಪಿಗಳ ಬಂಧನ

ದಾವಣಗೆರೆ: ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಫೆ.11ರಂದು ತಡರಾತ್ರಿ ದಾವಣಗೆರೆಯ ಶ್ರೀರಾಮನಗರದ ಮೂವರು ಯುವಕರು ಅಪಘಾತ ರೀತಿ ಮೃತಪಟ್ಟಿದ್ದರು. ಈ ಘಟನೆಯ ಹಿಂದಿನ ರಹಸ್ಯ ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಇದು ಅಪಘಾತವಲ್ಲ ಕೊಲೆ ಎಂದು ಆರೋಪಿ ಪತ್ತೆ ಮಾಡಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕ ಹಾಗೂ ರಾತ್ರಿ ದರೋಡೆಗೆ ಇಳಿದಿದ್ದ ದಾವಣಗೆರೆಯ ಮೂವರು  ಆರೋಪಿಯನ್ನು ಸಹ ಬಂಧಿಸಿದ್ದಾರೆ.

ಉತ್ತರ ಪ್ರದೇಶ ಮೂಲದ ಲಾರಿ ಚಾಲಕ ಭೋಲೆ ಯಾದವ್ ಕೊಲೆ ಹಂತಕನಾಗಿದ್ದು, ದಾವಣಗೆರೆ ಗ್ರಾಮಾಂತರ, ಡಿಸಿಐಬಿ ಪೊಲೀಸರು ಚೆನ್ನೈಯಲ್ಲಿ ಲಾರಿ ಸಮೇತ ಚಾಲಕ ಹಾಗೂ ದರೋಡೆ ಮಾಡಿದ್ದ ಗಣೇಶ್, ರಾಹುಲ್, ನಾಗರಾಜ್ ಎಂಬ ಮೂವರನ್ನು ಬಂಧಿಸಿದ್ದಾರೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆನಗೋಡು ಗ್ರಾಮದ ಸಮೀಪದ ಎನ್.ಎಚ್-48 ರಲ್ಲಿ ಫೆ. 11 ರ ಬೆಳಗಿನ ಜಾವ ದಾವಣಗೆರೆ ನಗರದ ಶ್ರೀರಾಮನಗರ ವಾಸಿಗಳಾದ ಪರಶುರಾಮ, ಶಿವ ಕುಮಾರ್, ಸಂದೇಶ್ ಎಂಬುವರ ಶವ ಪತ್ತೆಯಾಗಿದ್ದವು. ಮೇಲ್ನೋಟಕ್ಕೆ ಅಪಘಾತ ಎಂಬಂತೆ ಕಂಡು ಬಂದರೂ ಪೊಲೀಸರಿಗೆ ಇಡೀ ಅಪಘಾತದ ಬಗ್ಗೆಯೇ ಸಂಶಯ ಬಂದಿತ್ತು.

ಸಿಸಿ ಟಿವಿ, ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಅಪಘಾತದ ಯಾವ ಸುಳಿವೂ ಸಿಕ್ಕಿರಲಿಲ್ಲ. ಹಾಗಾಗಿಯೇ ಪೊಲೀಸರು ಲಾರಿ ಚಾಲಕನನ್ನ ಬೆನ್ನತ್ತಿ, ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಪಘಾತ ಅಲ್ಲ ಕೊಲೆ. ದರೋಡೆ ಮಾಡಿ, ಬೈಕ್‌ ನಲ್ಲಿ ಪರಾರಿಯಾಗುತ್ತಿದ್ದವರ ಮೇಲೆ ಚಾಲಕ ಲಾರಿ ಹತ್ತಿಸಿದ್ದರಿಂದ ಮೂವರು ಸಾವನ್ನಪ್ಪಿದ್ದರು ಎಂಬುದು ಪತ್ತೆಯಾಗಿದೆ.

ಪ್ರಕರಣದ ನಡೆದಿದ್ದ ಹೇಗೆ? : ಮೃತ ಪರಶುರಾಮ, ಶಿವಕುಮಾರ್, ಸಂದೇಶ್ ಅವರೊಟ್ಟಿಗೆ ಗಣೇಶ್, ರಾಹುಲ್ ಮತ್ತು ನಾಗರಾಜ್ ಎಂಬುವರು ಎರಡು ಬೈಕ್‌ ನಲ್ಲಿ ತೆರಳಿ ಆನಗೋಡು ಗ್ರಾಮದ ಬಳಿ ರಸ್ತೆ ಪಕ್ಕದಲ್ಲಿ ಲಾರಿ ಚಾಲಕನನ್ನು ಹೆದರಿಸಿ, ಹಲ್ಲೆ ಮಾಡಿ 8 ಸಾವಿರ ನಗದು, ಮೊಬೈಲ್ ಹಾಗು ಇತರೆ ವಸ್ತುಗಳನ್ನು ಕಿತ್ತುಕೊಂಡಿದ್ದರು.

ದರೋಡೆ ಮಾಡಿಕೊಂಡು ಹೋದ ಬೈಕ್‌ ಗಳ ಮೇಲೆ ಚಾಲಕ ಲಾರಿ ಹತ್ತಿಸಿ ಒಂದು ಬೈಕ್‌ ನಲ್ಲಿ ಹೋಗುತ್ತಿದ್ದ ಪರಶುರಾಮ, ಶಿವಕುಮಾರ ಮತ್ತು ಸಂದೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನೊಂದು ಬೈಕ್‌ ನಲ್ಲಿದ್ದ ನಾಗರಾಜ, ಗಣೇಶ ಮತ್ತು ರಾಹುಲ್ ಗಾಯಗೊಂಡಿದ್ದರು.ದಾವಣಗೆರೆ ತಾಲೂಕಿನ ಕಾಟೀಹಳ್ಳಿಯಲ್ಲಿ ಜಾತ್ರೆಯಲ್ಲಿ ಭಾಗವಹಿಸಿ ಶ್ರೀರಾಮನಗರಕ್ಕೆ ವಾಪಸ್ ಬರುವಾಗ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಇಡೀ ಅಪಘಾತ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ಡಿಸಿಐಬಿ, ಗ್ರಾಮಾಂತರ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಲಾರಿ ಚಾಲಕ ಭೋಲೆ ಯಾದವ್‌ನನ್ನ ಬಂಧಿಸಿ ವಿಚಾರಣೆ ನಡೆಸಿದಾಗ ಅಪಘಾತ ಅಲ್ಲ ಕೊಲೆ ಹಾಗೂ ದರೋಡೆ ನಡೆಸಿದ್ದು ಬೆಳಕಿಗೆ ಬಂದಿದೆ.ಎಲ್ಲ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಫ್ಪಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top