Connect with us

Dvgsuddi Kannada | online news portal | Kannada news online

ವೀರಶೈವ-ಲಿಂಗಾಯಿತ ಸಮುದಾಯಕ್ಕೆ 75 ಕ್ಷೇತ್ರಗಳಲ್ಲಿ ‘ಬಿ’ ಫಾರಂ ನೀಡುವಂತೆ ಎಐಸಿಸಿಗೆ ಶಾಮನೂರು ಶಿವಶಂಕರಪ್ಪ ಮನವಿ

ಪ್ರಮುಖ ಸುದ್ದಿ

ವೀರಶೈವ-ಲಿಂಗಾಯಿತ ಸಮುದಾಯಕ್ಕೆ 75 ಕ್ಷೇತ್ರಗಳಲ್ಲಿ ‘ಬಿ’ ಫಾರಂ ನೀಡುವಂತೆ ಎಐಸಿಸಿಗೆ ಶಾಮನೂರು ಶಿವಶಂಕರಪ್ಪ ಮನವಿ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವೀರಶೈವ-ಲಿಂಗಾಯಿತ ಸಮುದಾಯದವರಿಗೆ ಆಯ್ದ 75 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ಅಖಿಲ ಭಾರತ ವೀರಶೈವ- ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರು ಎಐಸಿಸಿಗೆ ಆಗ್ರಹಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಎಐಸಿಸಿ ಸ್ಕ್ರಿನಿಂಗ್ ಕಮಿಟಿಯ ಅಧ್ಯಕ್ಷ ಮೋಹನ್ ಪ್ರಕಾಶ್ ಅವರನ್ನು ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಭೇಟಿ ಮಾಡಿದ ವೀರಶೈವ-ಲಿಂಗಾಯಿತ ಮುಖಂಡರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ನೀಡಿದರು.

ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಬೆಂಗಳೂರಿನ ನಿವಾಸದಲ್ಲಿ ವೀರಶೈವ ಲಿಂಗಾಯತ ಸಮಾಜದ ಕಾಂಗ್ರೆಸ್ ನಾಯಕರು ಎರಡು ಸುತ್ತಿನ ಸಭೆ ಮಾಡಿದ ನಾಯಕರು, ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಚರ್ಚೆ ನಡೆಸಿ 75 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುವ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ರೆಡಿ ಮಾಡಿದ್ದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಕೆಪಿಸಿಸಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ, ಮಾಜಿ ಸಚಿವರಾದ ವಿನಯ್ ಕುಲಕರ್ಣಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್, ಮಾಜಿ ಮೇಯರ್ ಪುಟ್ಟರಾಜ್, ಅಖಿಲ ಭಾರತ ವೀರಶೈವ- ಮಹಾಸಭಾದ ಕಾರ್ಯದರ್ಶಿ ರೇಣುಕ ಪ್ರಸನ್ನ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮತ್ತಿತರರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top