ದಾವಣಗೆರೆ: 1.87 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಕೊಟ್ರಗೌಡರಿಗೆ ಜಾಮೀನು ನೀಡಲು ಜಿಲ್ಲಾ ಸೆಷನ್ಸ್ ಹಾಗೂ ವಿಶೇಷ ಲೋಕಾಯುಕ್ತ ಕೋರ್ಟ್ ನಿರಾಕರಿಸಿದೆ.
ರೇಖಾ ಕೊಟ್ರಗೌಡರು ದಾವಣಗೆರೆ ಜಿಲ್ಲಾ ಸೆಷನ್ಸ್ ಹಾಗೂ ವಿಶೇಷ ಲೋಕಾಯುಕ್ತ ಕೋರ್ಟ್ಗೆ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ರಾಜೇಶ್ವರಿ ಎನ್. ಜಾಮೀನು ನೀಡಲು ನಿರಾಕರಿಸಿದ್ದಾರೆ. ಫೆ.5ರಂದು ಪೋಕ್ಸೋ ಪ್ರಕರಣದ ಆರೋಪಿಯಿಂದ 1.87 ಲಕ್ಷ ಲಂಚ ಸ್ವೀಕರಿಸುವಾಗ ಪೋಕ್ಸೋ ನ್ಯಾಯಾಲಯ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು.



