ಚನ್ನಗಿರಿ;ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ ಭವನದ ನಿರ್ಮಾಣಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಶಿಫಾರಸ್ಸಿನ ಮೇರೆಗೆ ನಿವೇಶನ ಮಂಜೂರಾಗಿದೆ.
ಚನ್ನಗಿರಿ ಸಮೀಪದ ಅಜ್ಜಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕೂಲಿಕೆರೆ ಗ್ರಾಮದಲ್ಲಿ 80×60 ಅಳತೆಯ ವಿಶಾಲವಾದ ನಿವೇಶನವು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿಗೆ ಮಂಜೂರಾಗಿದೆ. ಶೀಘ್ರದಲ್ಲೇ ಅವಶ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿಸಿ, ಕನ್ನಡ ಸಾಹಿತ್ಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಾಸಕ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದ್ದಾರೆ.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ
ಬಸವಾಪಟ್ಟಣದ ಎಲ್.ಜಿ.ಮಧುಕುಮಾರ್ ನೇತೃತ್ವದಲ್ಲಿ ಪರಿಷತ್ತಿನ ಪದಾಧಿಕಾರಿಗಳು ಶಾಸಕ ಹ ವಿರೂಪಾಕ್ಷಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಅಂದಾಜು 50 ಲಕ್ಷ ರೂ. ಅನುದಾನಕ್ಕೆ ಮನವಿ ಸಲ್ಲಿಸಿದರು. ಎಂ.ಯು.ಚನ್ನಬಸಪ್ಪ, ಅಜ್ಜಿಹಳ್ಳಿ ಗ್ರಾಪಂ ಉಪಾಧ್ಯಕ್ಷ ಜಿ.ಎಸ್.ಸಂಗಮ್, ಕಸಾಪ ಕಾರ್ಯದರ್ಶಿ ಮಂಟರಘಟ್ಟ ಬಸವನಗೌಡ, ಹೊದಿಗೆರೆ ಪ್ರಭಾಕರ್, ಕೋಶಾಧ್ಯಕ್ಷ ಬಿ.ಇ.ಸಿದ್ದಪ್ಪ, ಜಿಲ್ಲಾ ಸಹ ಕಾರ್ಯದರ್ಶಿ ಕೆ.ಎಸ್.ವೀರೇಶ
ಪ್ರಸಾದ್, ಮಾದೇನಹಳ್ಳಿ ಓಂಕಾರಮೂರ್ತಿ ಇತರಿದ್ದರು.



