ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವಿ ಶಿಕ್ಷಕರ ನೇಮಕಾತಿ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಇಂದೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿ ಮಾಹಿತಿ ನೀಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ.
— B.C Nagesh (@BCNagesh_bjp) February 27, 2023
ಸ್ಪರ್ಧಾತ್ಮಕ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ ನಂತರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಆದರೆ, ಕೆಲ ಅಭ್ಯರ್ಥಿಗಳು ತಂದೆಯ ಜಾತಿ ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ತಂದೆಯ ಜಾತಿ ಆದಾಯ ಪ್ರಮಾಣಪತ್ರವನ್ನು ಪರಿಗಣಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಮರು ಸಿದ್ದಪಡಿಸಿದ 15,000 ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ರಾತ್ರಿ 8 ಗಂಟೆಗೆ ಪ್ರಕಟಿಸಲಾಗುತ್ತಿದೆ.