ಬೆಂಗಳೂರು: ಸರ್ಕಾರ ಮಧ್ಯಂತರ ಶೇ.17 ರಷ್ಟು ವೇತನ ಹೆಚ್ಚಳ ಹಾಗೂ ರಾಷ್ಟ್ರೀಯ ಪಿಂಚಣಿ ಯೋಜನೆ -ಎನ್ ಪಿಎಸ್ ಬಗ್ಗೆ ಪರಿಶೀಲನೆ ಸಂಬಂಧ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಇಂದಿನಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ವಾಪಸ್ ಪಡೆಯಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್. ಷಡಕ್ಷರಿ, ಸರ್ಕಾರಿ ನೌಕರರ ವೇತನನ್ನು ಶೇ.17ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. 15 ಲಕ್ಷ ನಿವೃತ್ತ ನೌಕರರಿಗೂ ಅನುಕೂಲಗಳು ಆಗಲಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ ಎಂದರು.
ಸರ್ಕಾರಿ ನೌಕರರು ರಾಜ್ಯ ಸರ್ಕಾರದ ಆದೇಶವನ್ನು ಒಪ್ಪಿದ್ದೇವೆ. ಹಾಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ ನೌಕರರ ಮುಷ್ಕರ ವಾಪಸ್ ಪಡೆಯುವುದಾಗಿ ಘೋಷಿಸಿದರು. ನಾಳೆಯಿಂದ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದರು.



