ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ಕೈಗೊಂಡ ಮುಷ್ಕರ ಹಿನ್ನೆಲೆ ಸರ್ಕಾರ, ಈ ಬಗ್ಗೆ ಪರಿಶೀಲಿಸಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರವು ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದೆ. 01.04.2006 ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ರಾಜ್ಯ ಸರ್ಕಾರಿ ನೌಕರರ ಸಂಘ, ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲು ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿತ್ತು.
ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿದೆ.



