ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಹೊಬಳಿಯನ್ನು ಹೊಸ ತಾಲ್ಲೂಕನ್ನಾಗಿ ರಚಿಸುವ ಬಗ್ಗೆ ಜನಾಭಿಪ್ರಾಯ ಸಂಗ್ರಹಿಸಲು ಜಿಲ್ಲಾಧಿಕಾರಿಗಳು ಜ. 04 ರಂದು ಸಭೆ ಕರೆದಿದ್ದಾರೆ. ಸಭೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಗೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ರಾಜಕೀಯ ಮುಖಂಡರು, ಸಾರ್ವಜನಿಕರು, ಸಂಘ ಸಂಸ್ಥೆಯ ಮುಖಂಡರು ಸಭೆಗೆ ಹಾಜರಾಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



