ಡಿವಿಜಿ ಸುದ್ದಿ, ತುಮಕೂರು: ಪೌರತ್ವ ಕಾಯ್ದೆ ವಿರೋಧಿಸುತ್ತಿರುವರೇ.. ನಿಮಗೆ ವಿರೋಧಿಸಬೇಕು, ಹೋರಾಡಲೇಬೇಕು ಅಂತಾ ನಿಮ್ಮ ಮನಸ್ಸಿನಲ್ಲಿ ಇದ್ದರೆ, ಪಾಕಿಸ್ತಾನದಲ್ಲಿ ಈವರೆಗೆ ಏನೆಲ್ಲಾ ಆಗಿದೆ ಅದರ ಬಗ್ಗೆ ಹೋರಾಡಿ. ಅದರಲ್ಲೂ ವಿಶ್ವ ವೇದಿಕೆಗಳಲ್ಲಿ ಪಾಕಿಸ್ತಾನದ ಬಣ್ಣ ಬಯಲು ಮಾಡಲು ಯತ್ನಿಸಿ ಎಂದು ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
आज मैं संत समाज से 3 संकल्पों में सक्रिय सहयोग चाहता हूं।
पहला- अपने कर्तव्यों और दायित्वों को महत्व देने की अपनी पुरातन संस्कृति को हमें फिर मजबूत करना है।
दूसरा, प्रकृति और पर्यावरण की रक्षा।
और तीसरा, जल संरक्षण, जल संचयन के लिए जनजागरण में सहयोग: PM @narendramodi pic.twitter.com/ZYIM1ZhJlZ— PMO India (@PMOIndia) January 2, 2020
ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ವಸ್ತು ಸಂಗ್ರಹಾಲಯದ ಶಿಲಾನ್ಯಾಸ ಉದ್ಘಾಟಿಸಿ ಮಾತನಾಡಿದ ಅವರು, ನೀವು ಪಾಕಿಸ್ತಾನದ ಪರವಾಗಿ ಏಕೆ ಮಾತಾಡ್ತೀರಿ. ದೇಶದಲ್ಲಿ ದ್ವೇಷದ ವಾತಾವರಣ ನಿರ್ಮಿಸುತ್ತಿದ್ದೀರಿ ಎನ್ನುವುದನ್ನು ಜನರು ಗಮನಿಸುತ್ತಿದ್ದಾರೆ. ಪಾಕಿಸ್ತಾನದಿಂದ ಬಂದ ದಲಿತರು, ಶೋಷಿತರ ಬಗ್ಗೆ ನಿಮಗೆ ಕಾಳಜಿಯಿಲ್ಲ ಎಂದು ತರಾಟೆಗೆ ತಗೆದುಕೊಂಡರು.
Watch Live! https://t.co/nEFHm4tm9u
— PMO India (@PMOIndia) January 2, 2020
ಆರ್ಟಿಕಲ್ 371 ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಜನರಿಗೆ ಅವರ ಹಕ್ಕನ್ನು ನೀಡಿದ್ದೇನೆ. ಅಲ್ಲಿಯ ಜನರ ಅನಿಶ್ಚಿತತೆ ಮತ್ತು ಭಯೋತ್ಪಾದನೆಯ ಭಯವನ್ನು ದೂರ ಮಾಡಿದ್ದೇವೆ. ದೇಶದಲ್ಲಿ ರಾಮ ಮಂದಿರ ನಿರ್ಮಾಣದ ವಾತಾವರಣ ನಿರ್ಮಿಸಲಾಗಿದೆ.
ಪಾಕಿಸ್ತಾನದಲ್ಲಿ ಧರ್ಮದ ಆಧಾರದ ಮೇಲೆ ಹಿಂಸೆ ನೀಡುತ್ತಿದೆ. ಅಲ್ಲಿಯ ಹಿಂದೂ, ಸಿಖ್, ಜೈನ್ ಭಾರತಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಭಾರತಕ್ಕೆ ಆಗಮಿಸುತ್ತಿರುವರಿಗೆ ಪ್ರಾಣ, ಮಾನ, ಹಣ್ಣು ಮಕ್ಕಳ ರಕ್ಷಣೆ, ಸಹಾಯ ಮಾಡೋದು ನಮ್ಮ ಕರ್ತವ್ಯ ಮತ್ತು ಸಂಸ್ಕಂತಿ. ಆದರೆ ವಿಪಕ್ಷಗಳು ಜನರನ್ನು ದಾರಿ ತಪ್ಪಿಸುವ ಸಲುವಾಗಿ ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿವೆ. ಅವರು ಪಾಕಿಸ್ತಾನದ ವಿರುದ್ಧ ಮಾತನಾಡಲ್ಲ. ಬೇರೆ ದೇಶದಿಂದ ಬಂದ ಅಲ್ಪಸಂಖ್ಯಾತರ ಬದುಕು ಅರಿಯಲು, ಸುಧಾರಿಸಲು ಪ್ರತಿಪಕ್ಷಗಳಿಗೆ ಸಮಯವೇ ಇಲ್ಲ ಎಂದು ಪ್ರಶ್ನಿಸಿದರು.
ಪ್ರಧಾನಿ ಭಾಷಣಕ್ಕೆ ಸಿದ್ಧರಾಮಯ್ಯ ಕಿಡಿ
ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ನರೇಂದ್ರ ಮೋದಿ ಅವರೇ ,ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ಕಿಡಿಕಾರಿದ್ದಾರೆ.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ.
ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ.ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ @narendramodi ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು.
— Siddaramaiah (@siddaramaiah) January 2, 2020



