ದಾವಣಗೆರೆ; ತಮ್ಮ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆಂದು ಆರೋಪಿಸಿ ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಸ್. ಬಸವಂತಪ್ಪ ವಿರುದ್ಧ ಸ್ವ-ಪಕ್ಷದವರಿಂದಲೇ ದೂರು ದಾಖಲಾಗಿದೆ.
ಮಾಯಕೊಂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸವಿತಾ ಬಾಯಿ ಮಲ್ಲೇಶ್ ನಾಯ್ಕ್ ಅವರು, ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಅಶ್ಲೀಲ ದೃಶ್ಯ ಹರಿಬಿಟ್ಟ ಹಿನ್ನಲೆ ಪ್ರಕರಣ ದಾಖಲಿಸಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಸವಿತಾಬಾಯಿ ಮಲ್ಲೇಶ್ ನಾಯ್ಕ್ ಅವರ ಪೋಟ್ ಹರಿದಾಡಿದ್ದವು. ತಮ್ಮ ಫೋಟೋಗಳನ್ನು ಬಸವಂತಪ್ಪ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ತನಿಖೆ ಕೈಗೊಳ್ಳಲಾಗಿದೆ.



