ಡಿವಿಜಿ ಸುದ್ದಿ, ತುಮಕೂರು: ದೇಶದ 6 ಕೋಟಿ ರೈತ ಕುಟುಂಬದ ಬ್ಯಾಂಕ್ ಖಾತೆಗಳಿಗೆ 12 ಸಾವಿರ ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರ್ಕಾರದಿಂದ ಜಮೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ತುಮಕೂರಿನಲ್ಲಿ ನಡೆದ ರೈತ ಸಮಾವೇಶದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಕೃಷಿ ಸಮ್ಮಾನ್ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿ ಮಾತನಾಡಿದ ಅವರು, ಯೋಜನೆಯನ್ವಯ ಪ್ರತಿ ರೈತರ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗುತ್ತಿದೆ. ಇದು 3ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮವಾಗಿದ್ದು, ಈಗಾಗಲೇ 2 ಕಂತು ಬಿಡುಗಣೆ ಮಾಡಲಾಗಿದೆ. ಒಟ್ಟಾರೆ 6 ಸಾವಿರ ರೂಪಾಯಿ ಪ್ರೋತ್ಸಾಹ ಧನ ರೈತರ ಖಾತೆಗೆ ಸೇರಿದಂತಾಗಿದೆ ಎಂದರು.
Watch Live! https://t.co/Q3QVXxTnrH
— PMO India (@PMOIndia) January 2, 2020
ಈ ಹಿಂದೆ ಬಡವರು, ರೈತರಿಗೆ ಸರ್ಕಾರ ನೀಡುತ್ತಿದ್ದ ಹಣ ಸೂಕ್ತವಾಗಿ ತಲುಪುತ್ತಲೇ ಇರಲಿಲ್ಲ. ಸರ್ಕಾರ 1 ರೂಪಾಯಿ ಕೊಟ್ಟರೆ, ರೈತರಿಗೆ ಕೇವಲ 15 ಪೈಸೆ ಸಿಗ್ತಿತ್ತು. ಇದೀಗ ನೇರವಾಗಿ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ. ರೈತರ ಖಾತೆಗೆ ಹಣ ಜಮೆ ಮಾಡುವ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೂ ಇಂದು ಚಾಲನೆ ಸಿಕ್ಕಿದೆ ಎಂದು ತಿಳಿಸಿದರು.



