ದಾವಣಗೆರೆ: ಪಂಜಾಬ್ ಹರಿಯಾಣ ಸೆಕ್ರೆಟರಿಯೇಟ್‌ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ದಾವಣಗೆರೆ ಜಿಲ್ಲೆಯ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆಯ ಹದಡಿ ಗ್ರಾಮದ ನಾಗರಾಜು ಗುಂಡು ಹಾರಿಸಿಕೊಂಡು ಸಾವಿಗೆ ಶರಣಾದ ಯೋಧ ಎಂದು ಗುರುತಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯಲ್ಲಿ ಸೇವೆ ಸಲ್ಲಿಸಿದ್ದರು.
ಚಂಡೀಗಢದಲ್ಲಿರುವ ಪಂಜಾಜ್ ಹರಿಯಾಣ ಸೆಕ್ರೆಟರಿಯೇಟ್‌ನಲ್ಲಿ ನಾಗರಾಜು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಾಗರಾಜ್ ಅವರ ಪಾರ್ಥಿವ ಶರೀರವನ್ನು ಸೋಮವಾರ ಸ್ವಗ್ರಾಮ ಹದಡಿಗೆ ತರಲಾಗುತ್ತದೆ ಎಂದು ದಾವಣಗೆರೆ ಎಸ್ಪಿ ಸಿ.ಬಿ. ರಿಷ್ಯಂತ್ ಮಾಹಿತಿ ನೀಡಿದ್ದಾರೆ.



