ದಾವಣಗೆರೆ: ಕೇಂದ್ರ ಮತ್ತು ರಾಜ್ಯದಲ್ಲಿರೋದು ಹಿಟ್ಲರ್ ಸರ್ಕಾರ. ಜಿಲ್ಲೆಯಲ್ಲಿ ಸಹ ಒಂದು ಭಾಗ ಹಿಟ್ಲರ್, ಇನ್ನೊಂದು ಭಾಗ ಯಾರದ್ದು ಎಂಬುದು ಎಲ್ಲರಿಗೂ ಗೊತ್ತಿದೆ. ನನ್ನ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಬೇಕಾದರೂ ಸ್ಪರ್ಧಿಸಲಿ ನಾನೇ ಗೆಲ್ಲುತ್ತೇನೆ ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.
ಶಾಮನೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕುಕ್ಕರ್ ಹಂಚಿದ್ದಾರೆಂದು ಕೇಸ್ ಹಾಕಿದ್ದಾರೆ. ಕೇಂದ್ರ, ರಾಜ್ಯದಲ್ಲಿ ಅವರದ್ದೇ ಸರ್ಕಾರ ಇದೆ. ಹೀಗಾಗಿ ಕೇಸ್ ಹಾಕಿಸುತ್ತಿದ್ದಾರೆ. ಹಿಂದೆ ಪ್ರಾಣಿಯ ಕೇಸ್ ಹಾಕಿಸಿದರು. ಅದು ಕೋರ್ಟ್ ನಲ್ಲಿದೆ. ಹಾಗಾಗಿ ಅದರ ಬಗ್ಗೆ ಮಾತನಾಡಲ್ಲ ಎಂದರು.
ಕಳೆದ ಸಲ ಸ್ವಲ್ಪ ಜಾಸ್ತಿ ಹುಮ್ಮಸಿನಲ್ಲಿದ್ದೇ, ಹೀಗಾಗಿ ಸೋಲಾಗಿದೆ. ಈ ಬಾರಿ ಆ ರೀತಿ ಆಗಲ್ಲ. ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ್ದ ಕಾಮಗಾರಿಗಳೇ ಈಗ ನಡೆಯುತ್ತಿವೆ. ರಾಜ್ಯದಲ್ಲಿ 40 ಪರ್ಸೆಂಟ್ ಸರ್ಕಾರ ಇದ್ದು, ಜನ ಜನ ಬೇಸತ್ತಿದ್ದಾರೆ ಎಂದರು.
ಎಲ್ಲೆಡೆ ನಮ್ಮ ಪಕ್ಷದ ಪರ ಅಲೆ ಈಗಾಗಲೇ ಎದ್ದಿದ್ದು, ನಮಗೂ ಹುಮ್ಮಸ್ಸು ತಂದಿದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಜನರೇ ಈ ಬಾರಿ ಒತ್ತಾಯ ಮಾಡಿದ್ದರು. ಆ ಕಾರಣಕ್ಕಾಗಿಯೇ ನಾನು ಸ್ಪರ್ಧಿಸುತ್ತಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವೇ ಜನರ ಒಲವು ಇದ ಎಂದರು.



