ದಾವಣಗೆರೆ: ನಗರದ ಹೊರ ವಲಯದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಸಂಫೂರ್ಣ ಜಖಂಗೊಂಡಿದೆ.
ಬೆಂಗಳೂರಿಂದ ಹುಬ್ಬಳ್ಳಿ ಕಡೆ ಹೋಗುತ್ತಿದ್ದ ಕಾರು ದಾವಣಗೆರೆ ಜಿ.ಪಂ ಕಚೇರಿ ಬಳಿ ಅಪಘಾತವಾಗಿದೆ. ವೇಗವಾಗಿ ಬಂದ ಕಾರು ಟೆಂಪೋ ಟ್ರಾವೆಲ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



