ದಾವಣಗೆರೆ; ಜಿಲ್ಲೆಯ ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದ ಗೋಮಾಳ ಜಮೀನಲ್ಲಿ ವಾಸವಿದ್ದ ಬಡವರ ಗುಡಿಸಲಿಗೆ ರಾತ್ರೋರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಮನೆ ಇಲ್ಲದ ಬಡವರು ಕಳೆದ ಮೂರು-ನಾಲ್ಕು ತಿಂಗಳಿನಿಂದ 25ಕ್ಕೂ ಹೆಚ್ಚು ಕುಟುಂಬಗಳು ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿದ್ದರು. ಗುರುವಾರ ರಾತ್ರಿ ಕಿಡಿಗೇಡಿಗಳು ಈ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದು, ಇವುಗಳಲ್ಲಿ25 ಕ್ಕೂ ಹೆಚ್ಚು ಗುಡಿಸಲುಗಳ ಗೃಹಪಯೋಗಿ ವಸ್ತುಸೇರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ.
ಇಲ್ಲಿ ವಾಸಿಸುತ್ತಿದ್ದ ಎಲ್ಲಾ ಕುಟುಂಬಗಳು ದಲಿತ ವರ್ಗಕ್ಕೆ ಸೇರಿದ್ದು, ಗ್ರಾಮದೇವತೆ ಕರಿಯಾ೦ಬಿಕಾ ದೇವಿ ಜಾತ್ರೆ ಕಾರಣ ಗುಡಿಸಲು ನಿವಾಸಿಗಳು ಈ ಹಬ್ಬಕ್ಕಾಗಿ ಹಿರೇಕೋಗಲೂರು ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಕಿಡಿಗೇಡಿಗಳು ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಾರೆ.ಈ ವಿಷಯ ತಿಳಿದು ಅಗ್ನಿಶಾಮಕ ಠಾಣೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಶುಕ್ರವಾರ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಡಿವೈಎಸ್ಪಿ
ಡಾ.ಸಂತೋಷ್, ವೃತ್ತ ನಿರೀಕ್ಷಕ ಮಹೇಶ್, ಪಿಎಸ್ಐ ದೇವರಾಜ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.



