ದಾವಣಗೆರೆ: ಕಾಡಿನಿಂದ ನಾಡಿಗೆ ಬಂದ ಆನೆಯೊಂದು ದಾಳಿ ಮಾಡಿದ್ದು, ದಾಳಿಗೆ ಯುವತಿ ಬಲಿಯಾಗಿದ್ದಾರೆ. ಇನ್ನೂ ಇಬ್ಬರಿಗೆ ಗಾಯಗಳಾಗಿವೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸೋಮ್ಲಾಪುರ, ಕಾಶಿಪುರ ಗ್ರಾಮದ ಬಳಿ ನಡೆದಿದೆ.
ಕವನ (17) ಸಾವನ್ನಪ್ಪಿದ ಯುವತಿಯಾಗಿದ್ದು, ಜಮೀನಿನಲ್ಲಿ ತಾಯಿ ಜೊತೆ ಅವರೆಕಾಯಿ ಬಿಡಿಸುವಾಗ ಹಿಂದಿನಿಂದ ಬಂದ ಆನೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಕವನಾಳನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲೇ ಸಾವನಪ್ಪಿದ್ದಾರೆ. ಇನ್ನು ಗಾಯಗೊಂಡ ತಾಯಿ ಮಂಜುಳಾಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಗಿ ಕಾಣಿಸಿಕೊಂಡ ಆನೆ, ಕವನ ತಾಯಿ ಸಹಿತ ದಾವುಜ್ ನಾಯ್ಕ್ ಎಂಬುವರ ಮೇಲೆ ದಾಳಿ ನಡೆದಿದೆ. ಕಾಶಿಪುರ, ಸೋಮ್ಲಾಪುರ, ಸೂಳೆಕೆರೆ ಸುತ್ತಮುತ್ತಲಿನ ಜನರು ಭಯಗೊಂಡಿದ್ದಾರೆ. ಯಾರು ಲ ಕೂಡ ಒಂಟಿಯಾಗಿ ಓಡಾಡಬಾರದು ಎಂದು ಅರಣ್ಯ ಇಲಾಖೆಯಿಂದ ಜನರಿಗೆ ಎಚ್ಚರಿಕೆ ನೀಡಿದೆ. ಅರಣ್ಯ ಇಲಾಖೆ ಆನೆ ಓಡಿಸುವ ಕೆಲಸದಲ್ಲಿ ನಿರತವಾಗಿದೆ. ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.