ಬೆಂಗಳೂರು; ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಮುಂದಿನ ಐದು ದಿನ (ಏಪ್ರಿಲ್ 12) ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವೆಡೆ, ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಧಾರವಾಡ, ಹಾವೇರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಒಂದಷ್ಟು ಕಡೆಗಳಲ್ಲಿ ಮಳೆ ಬೀಳಲಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ದಾವಣಗೆರೆ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಲವೆಡೆ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



