ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪೂಜಾರ್ ವೀರಮಲ್ಲಪ್ಪ ಅವರು ಜಿಲ್ಲಾಡಳಿತ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೆಚ್ಚುವರಿ ಜಿಲ್ಲಾಧಿಕಾರಿ ಅವರನ್ನು ಸ್ವಾಗತಿಸಿದರು.
ವೀರ ಮಲ್ಲಪ್ಪ ಅವರು ಇದಕ್ಕೂ ಮುನ್ನ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಪದ್ಮಾ ಬಸವಂತಪ್ಪ ಅವರು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕವಾಗಿದ್ದರು. ಈ ಹುದ್ದೆಯನ್ನು ನಗರಾಭಿವೃದ್ಧಿ ಕೋಶಾಧಿಕಾರಿ ನಜ್ಮಾ ಜಿ. ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.



