ದಾವಣಗೆರೆ: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ಸರ್ಕಾರ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರಿನ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ದಾವಣಗೆರೆ ಎಸ್.ಪಿ. ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಕಲಬುರ್ಗಿ ಜಿಲ್ಲೆಯ ಎಸ್ ಪಿ ಹಾಗೂ ಪೊಲೀಸ್ ತರಬೇತಿ ಪ್ರಾಂಶುಪಾಲರಾಗಿದ್ದ ಡಾ.ಅರುಣ್ ಅವರನ್ನು ದಾವಣಗೆರೆ ನೂತನ ಎಸ್ ಪಿಯಾಗಿ ನೇಮಕ ಮಾಡಲಾಗಿದೆ. ಸಿ.ಬಿ ರಿಷ್ಯಂತ್ ಅವರಿಗೆ ಯಾವುದೇ ಸ್ಥಳವನ್ನು ತೋರಿಸಲಾಗಿಲ್ಲ. ಇನ್ನೂ ವೈಟ್ ಫೀಲ್ಡ್ ವಿಭಾಗಕ್ಕೆ ಧರ್ಮೇಂದ್ರ ಕುಮಾರ್ ಮೀನಾ ನೂತನ ಡಿಸಿಪಿಯಾಗಿ ನೇಮಕಗೊಂಡಿದ್ದಾರೆ.



