ದಾವಣಗೆರೆ: ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ನಾಳೆ ವಿವಿಧ ಕಡೆ ಪ್ರಚಾರ ಕೈಗೊಂಡಿದ್ದಾರೆ. ಮೊದಲು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ರೋಡ್ ಶೋ ಮೂಲಕ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. ನಂತರ ದಾವಣಗೆರೆ ಜಿಲ್ಲೆಯ ಜಗಳೂರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ, ಮಾಯಕೊಂಡದಲ್ಲಿ, ದಾವಣಗೆರೆ ದಕ್ಷಿಣ, ಉತ್ತರದಲ್ಲಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸುವರು. ಇದಾದಬಂತರ ಬಳ್ಳಾರಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗುವರು.



