ಡಿವಿಜಿ ಸುದ್ದಿ, ಬಳ್ಳಾರಿ: ಪೌರತ್ವ ತಿದ್ದುಪಡಿ ಕಾಯಿದೆ ಪರ ಶುಕ್ರವಾರ ಬಳ್ಳಾರಿಯಲ್ಲಿ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಳ್ಳಾರಿ ಶಾಸಕ ಶೋಮಶೇಖರ್ ರೆಡ್ಡಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕಾಂಗ್ರೆಸ್ ನಾಯಕ ವಿವೇಕ್ ಪಿ ನೀಡಿದ ದೂರಿನ ಅನ್ವಯ ಬಳ್ಳಾರಿ ಗಾಂಧಿನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಪ್ರತಿಭಟನೆ ವೇಳೆ ಸೋಮಸೇಖರ್ ರೆಡ್ಡಿ, ನೀವು ಶೇ. 17ರಷ್ಟು ಮಾತ್ರ ಇದ್ದೀರಿ. ನಾವು ಶೇ. 80ರಷ್ಟು ಇದ್ದೇವೆ. ನಾವು ತಿರುಗಿಬಿದ್ದರೆ ನಿಮ್ಮ ಪರಿಸ್ಥಿತಿ ಏನಾಗಬೇಕು ಎಂಬುದನ್ನು ಊಹಿಸಿಕೊಳ್ಳಿ. ಹಿಂದೂಗಳನ್ನು ಕೆಣಕಲು ಬರಬೇಡಿ ಎಂದು ಮುಸ್ಲಿಂ ಸಮುದಾಯದವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದರು.
ಈ ಭಾಷಣ ವಿಚಾರವಾಗಿ ಸೋಮಶೇಖರ್ ರೆಡ್ಡಿಯವರನ್ನು ಮೊದಲ ಆರೋಪಿಯನ್ನಾಗಿ ಮಾಡಿದ್ದು, ಕಾರ್ಯಕ್ರಮ ಆಯೋಜಿಸಿದ್ದ ‘ದೇಶಭಕ್ತ ನಾಗರಿಕ ವೇದಿಕೆ’ಯನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ಜಾತಿ ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯೆ ವಿಷ ಬೀಜವನ್ನು ಭಿತ್ತಿ, ಜಗಳವನ್ನು ಹಚ್ಚುವಂತ ಹೇಳಿಕೆಗಳನ್ನು ಸೋಮಶೇಖರ್ ರೆಡ್ಡಿ ನೀಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.
.



