ದಾವಣಗೆರೆ: ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಭೇಟಿ ನಂತರ ಬಿಜೆಪಿಗೆ ಒಳ್ಳೆಯ ವಾತಾವರಣವಿದ್ದು, ನೂರಕ್ಕೆ ನೂರು ಸ್ವಂತ ಬಲದಿಂದ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ 135 ಸೀಟು ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ಯಾರ ಜೊತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ. ರಾಜ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತಾ ಶಾ ರೋಡ್ ಶೋ ನಂತರ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ.ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಎಂಬುದು ಮೂರ್ಖತನ ನಿರ್ಧಾರ. ಮುಂಬರುವ ದಿನಗಳಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.



