Connect with us

Dvgsuddi Kannada | online news portal | Kannada news online

ದಾವಣಗೆರೆ; ಮೇ 08ರಿಂದ ಮೇ 11ವರೆಗೆ ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

ದಾವಣಗೆರೆ

ದಾವಣಗೆರೆ; ಮೇ 08ರಿಂದ ಮೇ 11ವರೆಗೆ ನಿಷೇಧಾಜ್ಞೆ ಜಾರಿ; ಜಿಲ್ಲಾಧಿಕಾರಿ ಆದೇಶ

ದಾವಣಗೆರೆ: ವಿಧಾನಸಭಾ ಸಾರ್ವತಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಮತದಾನ ಪ್ರಕ್ರಿಯೆಯನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಮೇ 08 ರಂದು ಸಂಜೆ 6.00 ಗಂಟೆಯಿಂದ ಮೇ 11 ರ ಸಂಜೆ 6.00 ಗಂಟೆಯವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶ ಹೊರಡಿದ್ದಾರೆ.

ಈ ನಿಷೇದಾಜ್ಞೆಯ ಅವಧಿಯಲ್ಲಿ ಮೇ 10 ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ, ಮತದಾನ ನಡೆಯುವ ಪ್ರದೇಶದಲ್ಲಿ 5 ಜನರಿಗಿಂತ ಹೆಚ್ಚಿನ ವ್ಯಕ್ತಿಗಳು ಗುಂಪುಗೂಡಲು, ಒಟ್ಟಾಗಿ ಓಡಾಡುವಂತಿಲ್ಲ. ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮತ್ತು ಸಾರ್ವಜನಿಕ ಸಭೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಮೆರವಣಿಗೆ ಹಾಗೂ ಪ್ರತಿಭಟನೆ ಮಾಡುವಂತಿಲ್ಲ.

ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಉಪಯೋಗಿಸಲು ಅನುಮತಿ ಇರುವುದಿಲ್ಲ. ನಿಷೇಧಾಜ್ಞೆಯು ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ ಹಾಗೂ ಇನ್ನಿತರೆ ಸಮಾರಂಭಗಳನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದುಕೊಂಡವರಿಗೆ ಈ ಆದೇಶದಿಂದ ವಿನಾಯಿತಿ ಇರುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top