ಬೆಂಗಳೂರು: ಇದೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ಚುನಾವಣೆ ಕರ್ತ್ಯವ್ಯಕ್ಕೆ ಪೊಲೀಸ್ ಸಿಬ್ಬಂದಿ, ಚುನಾವಣೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅವರನ್ನು ಒಂದು ದಿನ ಮೊದಲೇ ಮತಕೇಂದ್ರಕ್ಕೆ ಕೊಂಡೊಯ್ಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೆ ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಬಸ್ ಗಳನ್ನು ನಿಯೋಜಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮೇ.9, 10ರಂದು ಸಾರಿಗೆ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿಸಿ ಸಂಸ್ಥೆಯಿಂದ ಸಾರ್ವಜನಿಕರಿಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಪರ್ಯಾಯ ಸಂಚಾರದ ವ್ಯವಸ್ಥೆ ಕೈಗೊಳ್ಳುವಂತೆ ವಿನಂತಿಸಿದೆ.



