ಕೆನರಾ ಬ್ಯಾಂಕ್ ದೇಶಪಾಂಡೆ ರೂಡ್‍ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ, ಯುವತಿಯರಿಗಾಗಿ ಮೇ 15, 2023 ರಿಂದ 13 ದಿನಗಳ ಸಿ.ಸಿ.ಟಿ.ವಿ ಕ್ಯಾಮೆರಾ ದುರಸ್ತಿ ಮತ್ತು ಜೂನ್ ತಿಂಗಳಲ್ಲಿ ಮಹಿಳೆಯರಿಗಾಗಿ ಹೊಲಿಗೆ ತರಬೇತಿ ಹಾಗೂ ಸಮಗ್ರ ಕೃಷಿ ಉದ್ಯಮಿ ಉಚಿತ ತರಬೇತಿಗಳು ಪ್ರಾರಂಭವಾಗಲಿವೆ. ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಕೊನೆಯ ದಿನಾಂಕ ಮೇ.10, 2023 ಆಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.
ತರಬೇತಿಗಳು ಸ್ವ ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಆಗಲಿದ್ದು, ತರಬೇತಿಯಲ್ಲಿ ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ, ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕ್‍ನಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಮಾಹಿತಿಗಳನ್ನು ನೀಡಲಾಗುವುದು, ತರಬೇತಿಯಲ್ಲಿ ಭಾಗವಹಿಸುವರು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂ.ಸಂ: 9482188780, 9483485489, 8970145354, 9742438790 ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ರೂಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



