ಬೆಂಗಳೂರು; 2023-24 ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನ ವಸತಿ ಪದವಿ ಪೂರ್ವ ಶಾಲೆ, ಕಾಲೇಜುಗಳ ಪ್ರಥಮ ಪಿ.ಯು.ಸಿ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://kreis.karnatak.gov.in ಅಥವಾ ವಸತಿ ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ.