ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿನ ಸುಳಿಗಾಳಿ ಪರಿಣಾಮ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸತತ ಮಳೆಯಾಗುತ್ತಿದ್ದು, ಇಂದಿನಿಂದ ನಾಲ್ಕು ದಿನ ಗುಡುಗು ಮಿಂಚು ಸಹಿತ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ನಾಳೆ ಇನ್ನಷ್ಟು ಮಳೆ ತೀವ್ರವಾಗುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿರುತ್ತದೆ. ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.
ಇಂದು ಪಶ್ಚಿಮ ಘಟ್ಟ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಹಾಗೂ ಮೇ 10ರಂದು ಪಶ್ಚಿಮ ಘಟ್ಟ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಿಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.