Connect with us

Dvgsuddi Kannada | online news portal | Kannada news online

ದಾವಣಗೆರೆ; ಎರಡು ಪ್ರತ್ಯೇಕ ಭೀಕರ ಅಪಘಾತ ; ಇಬ್ಬರು ಬೈಕ್ ಸವಾರರು ಸಾವು

IMG 20230510 134639

ದಾವಣಗೆರೆ

ದಾವಣಗೆರೆ; ಎರಡು ಪ್ರತ್ಯೇಕ ಭೀಕರ ಅಪಘಾತ ; ಇಬ್ಬರು ಬೈಕ್ ಸವಾರರು ಸಾವು

ದಾವಣಗೆರೆ; ಜಿಲ್ಲೆಯ ಹರಿಹರ ತಾಲೂಕಿನಲ್ಲಿ ಪ್ರತ್ಯೇಕ ಎರಡು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸಾವನ್ಬಪ್ಪಿದ ಘಟನೆ ನಡೆದಿದೆ.

ತಾಲೂಕಿನ ಗುತ್ತೂರು ಗ್ರಾಮದಲ್ಲಿ ಕೆಇಬಿ ಹತ್ತಿರ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ನಡೆದ ಬಗ್ಗೆ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಬಗ್ಗೆ ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಹರಿಹರ ತಾಲೂಕಿನ ನಂದಿತಾವರೆ ಗ್ರಾಮದ ಹತ್ತಿರ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ನಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಲೆಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎರಡು ಪ್ರಕರಣ ಸ್ಥಳಕ್ಕೆ ಹೊಯ್ಸಳ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top