ಬೆಂಗಳೂರು; ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ‘ಪ್ರತಿಭಾ ಪುರಸ್ಕಾರ’ ವನ್ನು ನೀಡಿ ಗೌರವಿಸಲಾಗುತ್ತಿದೆ. 2023ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚು ಅಂಕಗಳಿಸಿರುವ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲು ನಮ್ಮ ಸಂಘದಿಂದ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಸೂಚನೆಗಳು;
- ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ರಾಜ್ಯ ಸರ್ಕಾರಿ ನೌಕರರಾಗಿರಬೇಕು ಹಾಗೂ ಸರ್ಕಾರಿ
ನೌಕರರ ಸಂಘದ ಸದಸ್ಯರಾಗಿರಬೇಕು - ಸಂಘದಿಂದ ನಿಗಧಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ
ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ
ದೃಢೀಕರಿಸಿ ಸಲ್ಲಿಸುವುದು - ನಿಗಮ, ಮಂಡಳಿ, ಪಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾಸಂಸ್ಥೆಯ
ನೌಕರರಾಗಿದ್ದಲ್ಲಿ ಅರ್ಜಿ ಸಲ್ಲಿಸುವಂತಿಲ್ಲ - ನಮೂನೆ ಹಾಗೂ ಅಗತ್ಯ ದಾಖಲೆಗಳಿಲ್ಲದಿದ್ದಲ್ಲಿ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2023
Online link: https://bit.ly/ksgeapp2023
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22354783/84, 9902135813 ಸಂರ್ಪಕಿಸುವುದು



