ದೆಹಲಿ: 70 ಸದಸ್ಯ ಬಲದ ದೆಹಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ಫೆ .8 ರಂದು ಚುನಾವಣೆ ನಡೆಯಲಿದ್ದು, ಫೆ.11 ರಂದು ಫಲಿತಾಂಶ ಹೊರ ಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೋರಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೆಹಲಿ ವಿಧಾನಸಭೆಗೆ ಫೆ.22 ರಂದು ಅವಧಿ ಮುಗಿಯಲಿದೆ. ಹೀಗಾಗಿ ಫೆ. 8 ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಜನವರಿ 14 ಅಧಿಸೂಚನೆ ಹೊರಡಿಸಲಾಗುವುದು. ಜ. 21ರಿಂದ ನಾಮ ಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜ.24 ನಾಮಪತ್ರ ವಾಪಸು ಪಡೆಯಲು ಕೊನೆಯ ದಿನವಾಗಿದೆ. ಫೆ.11 ರಂದು ಫಲಿತಾಂಶ ಹೊರ ಬೀಳಲಿದೆ ಎಂದರು.
ದೆಹಲಿಯಲ್ಲಿ ಒಟ್ಟು 13,750 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಿದ್ದು, 1.46 ಕೋಟಿ ಮತದಾರರಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ವಿವರಿಸಿದರು.



