ಬೆಂಗಳೂರು; ಹರಪನಹಳ್ಳಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಭರ್ಜರಿ ಜಯ ಗಳಿಸಿದ ನಂತರ ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಲತಾ ಮಲ್ಲಿಕಾರ್ಜುನ ಅವರು ಮಾಜಿ ಸಚಿವ, ಸಿದ್ದರಾಮಯ್ಯ ಆಪ್ತರಾಗಿದ್ದ ಎಂ.ಪಿ ಪ್ರಕಾಶ್ ಅವರ ಮಗಳಾಗಿದ್ದಾರೆ.ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದಕ್ಕೆ ಪಕ್ಷೇತರ ಅಭ್ಯರ್ಥಿ ಆಗಿದ್ದರು.
ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹರಪನಹಳ್ಳಿ ಕ್ಷೇತ್ರದಿಂದ ವಿಧಾನಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಲತಾ ಮಲ್ಲಿಕಾರ್ಜುನ ಅವರು ಇಂದು ನನ್ನನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರಿಗೆ ಶುಭ ಹಾರೈಸಿದೆ ಎಂದು ತಿಳಿಸಿದ್ದಾರೆ. ಶಾಸಕರಾಗಿ ಆಯ್ಕೆಯಾಗಿರುವ ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆ ಇದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 224 ಸದಸ್ಯ ಬಲದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುವ ಮೂಲಕ ಜಯ ತನ್ನದಾಗಿಸಿಕೊಂಡಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷ ಹಿಮಾಚಲ ಪ್ರದೇಶ ಬಳಿಕ ಕರ್ನಾಟಕ ರಾಜ್ಯ ಕಳೆದುಕೊಂಡಿದೆ.



