ಬೆಂಗಳೂರು; ರಾಜ್ಯದಲ್ಲಿ ಮುಂದಿನ ಎರಡು ದಿನ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಪ್ರತಿ ಘಂಟೆಗೆ 30-40 ಕಿಲೋ ಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.



