ಚಿತ್ರದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್ ನಾಯಕರೇ ಭರವಸೆ ಕೊಟ್ಟುದ್ದು, ಯಾರು ಕರೆಂಟ್ ಬಿಲ್ ಕಟ್ಟಬೇಡಿ ಅಂತಾ…, ನಾವು ಕೂಡ ಕರೆಂಟ್ ಬಿಲ್ ಕಟ್ಟಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದ ಘಟನೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗ್ತಿದೆ.
ಕಾಂಗ್ರೆಸ್ ಸರ್ಕಾರ ಬಂದಿದೆ.. ಕರೆಂಟ್ ಬಿಲ್ ಕಟ್ಟಲ್ಲರೀ… ಸರ್ಕಾರನೇ ಕಟ್ಟುತ್ತೇ..! pic.twitter.com/8NmSvQiPu0
— DVG Suddi (@dvg_suddi) May 15, 2023
ಪ್ರತಿ ತಿಂಗಳು ಬರುವಂತೆ ಬೆಸ್ಕಾಂನ ಮೀಟರ್ ರೀಡರ್ಗಳು ಈ ಗ್ರಾಮಕ್ಕೆ ಬಂದಿದ್ದಾರೆ. ಆಗ ಗ್ರಾಮಸ್ಥರು ವಿದ್ಯುತ್ ಬಿಲ್ ಕಟ್ಟಲ್ಲರೀ, ಸರ್ಕಾರನೇ ಹೇಳಿದೆ ಕಟ್ಟಬೇಡಿ ಎಂದು ಆವಾಜ್ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆ ಯಲ್ಲಿ 200 ಯೂನಿಟ್ ವಿದ್ಯುತ್ ಫ್ರೀ ಎಂದು ಘೋಷಿಸಿತ್ತು. ಈಗ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಕೂಡ ಸಿಕ್ಕಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆಯಲ್ಲ. ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಗ್ರಾಮದ ಜನರು ಹೇಳಿದ್ದಾರೆ. ಬೆಸ್ಕಾಂ ಸಿಬ್ಬಂದಿ ಸರ್ಕಾರದ ಆದೇಶ ಬರುವವರೆಗೂ ಬಿಲ್ ಕಟ್ಟಬೇಕು ಅಂತಾ ಹೇಳುತ್ತಿದ್ದಾರೆ. ಆದರೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮಸ್ಥರು ನೀವು ಕಾಂಗ್ರೆಸ್ ನಾಯಕರನ್ನೇ ಕೇಳಿ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದಿದ್ದಾರೆ.



