ದಾವಣಗೆರೆ: ರಾಜ್ಯದಲ್ಲಿ ಬೀದಿ ನಾಯಿಗಳ ದಾಳಿಗೆ 15 ಕುರಿಗಳು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಕುರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣದ ಬಳಿಯ ಕಂಸಾಗರ ಗ್ರಾಮದಲ್ಲಿ ನಡೆದಿದೆ.
ರೈತ ತಿಮ್ಮಣ್ಣ ಎಂಬುವರಿಗೆ ಸೇರಿದ ಕುರಿ ದೊಡ್ಡಿಯಲ್ಲಿ ನೂರಕ್ಕೂ ಹೆಚ್ಚು ಕುರಿಗಳಿದ್ದವು. ಇದ್ದಕ್ಕಿದ್ದಂತೆ ಮೂರ್ನಾಲ್ಕು ಬೀದಿ ನಾಯಿಗಳು ದಾಳಿ ಮಾಡಿ, ಕುರಿಗಳ ಕುತ್ತಿಗೆ ಕಚ್ಚಿ ಕೊಂದು ಹಾಕಿವೆ. ಕೂಡಲೇ ಪಶು ವೈದ್ಯರು ಸ್ಥಳಕ್ಕೆ ಆಗಮಿಸಿ ಗಾಯಗೊಂಡ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ.



