ದಾವಣಗೆರೆ: 2023-24ನೇ ಸಾಲಿನ ಪ್ರತಿಭಾನ್ವಿತ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ ಮೂಲಕ ಆಯ್ಕೆ ಮಾಡಿ ದಾಖಲಿಸಲು ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಥಿಯು 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ
ಕುಟು೦ಬದ ವಾರ್ಷಿಕ ವರಮಾನ 2ಲಕ್ಷಗಳೊಳಗಿರಬೇಕು. ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ,5ನೇ ತರಗತಿ ಅಂಕಪಟ್ಟಿ ಹಾಗೂ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳೊಂದಿಗೆ ಕಡ್ಡಾಯವಾಗಿ ಆಯಾ ತಾಲೂಕಿನಲ್ಲಿಯೇ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 25 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ ಹಾಗೂ ಸ೦ಬ೦ಧಿಸಿದ ತಾಲೂಕುಗಳ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಗೆ ಸ೦ಪರ್ಕಿಸಿ ಎ೦ದು ಇಲಾಖೆಯ
ಉಪನಿರ್ದೇಶಕರು ತಿಳಿಸಿದ್ದಾರೆ.