ದಾವಣಗೆರೆ: ಕೃಷ್ಣ ಮೃಗದ ಕೊಂಬು ಹಾಗೂ ಚರ್ಮ ಮಾರಾಟ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಓರ್ವನ ಬಂಧನ ಮಾಡಿದ್ದಾರೆ.
ಈ ಪ್ರಕರಣದ ಆರೋಪಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮೂಲದ ಮಲ್ಲಪ್ಪ ಮಾಂಡಾಳಿ (46)ಬಂಧಿಸಲಾಗಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಗರಗ ಕ್ರಾಸ್ ಬಳಿ ಹೊಟೇಲ್ನಲ್ಲಿ ಕೃಷ್ಣ ಮೃಗದ ಕೊಂಬು ಹಾಗೂ ಚರ್ಮ ಮಾರಾಟ ಮಾಡುವ ವೇಳೆ ಬಂಧನ ಮಾಡಲಾಗಿದೆ. ಪೊಲೀಸ್ ಅರಣ್ಯ ಸಂಚಾರಿ ದಳದ ಕಾರ್ಯಾಚರಣೆಯಿಂದ ಎರಡು ಕೃಷ್ಣ ಮೃಗದ ಕೊಂಬು ಹಾಗೂ ಮೂರು ಕೃಷ್ಣ ಮೃಗದ ಚರ್ಮವನ್ನು ವಶಕ್ಕೆ ಪಡೆಯಲಾಗಿದೆ.