ಬೆಂಗಳೂರು; ಮುಂದಿನ ಐದು ದಿನ ರಾಜ್ಯದಲ್ಲಿ ಮಳೆ ಬರುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಸಕ್ರಿಯವಾಗಿರಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿತ್ತು. ಈ ಬಾರಿ ನೈಋತ್ಯ ಮುಂಗಾರು ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.



