ದಾವಣಗೆರೆ: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಯೋಜನೆ ಘೋಷಿಸಿ ಗೆದ್ದು ಸರ್ಕಾರ ರಚಿಸಿದೆ. ಈಗ ಗ್ಯಾರಂಟಿ ಯೋಜನೆ ಜಾರಿ ಸರ್ಕಾರಕ್ಕೆ ಸವಾಲು ಆಗಿದೆ.ರಾಜ್ಯದಾದ್ಯಂತ ಜನ ಕರೆಂಟ್ ಬಿಲ್ ಕಟ್ಟಲ್ಲ ಎಂದು ಹೇಳುತ್ತಿದ್ದಾರೆ. ದಾವಣಗೆರೆ ತಾಲ್ಲೂಕಿನ ಗೋಣಿವಾಡ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ ಎಂದು ಸಾರು ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇವತ್ತಿನಿಂದ ಯಾರೂ ಇನ್ಮುಂದೆ ಕರೆಂಟ್ ಬಿಲ್ ಕಟ್ಟಂಗಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಆರ್ಡರ್ ಮಾಡಿ ಕಳುಹಿಸಿದ್ದಾರೆ ಎಂದು ಸಾರು ಹಾಕಲಾಗಿದೆ.ಈ ವ್ಯಕ್ತಿಗೆ ಸಾರು ಹಾಕಲು ಯಾರು ಸೂಚಿಸಿದರು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ವಿರೋಧ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ನ ನಾಯಕರು ವಿದ್ಯುತ್ ಬಿಲ್ ಯಾರು ಕಟ್ಟಬೇಡಿ ಎಂದು ಕರೆ ನೀಡಿದ ಬೆನ್ನಲ್ಲೇ ವಿದ್ಯುತ್ ಬಿಲ್ ಕಟ್ಟುವುದಕ್ಕೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರತಿರೋಧ ವ್ಯಕ್ತವಾಗುತ್ತಿದೆ.



