ಬೆಂಗಳೂರು: ಈ ವರ್ಷ ನೈಋತ್ಯ ಮುಂಗಾರು ವಿಳಂಬವಾಗಲಿದೆ. ಜೂನ್ 4ಕ್ಕೆ ಕೇರಳದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಜೂನ್ ಮೊದಲ ವಾರದಲ್ಲೇ ನೈರುತ್ಯ ಮುಂಗಾರು ಕರ್ನಾಟಕಕ್ಕೆ ಅಪ್ಪಳಿಸಬೇಕು. ಆದರೆ, ಕೇರಳಕ್ಕೆ ತಡವಾಗಿ ಪ್ರವೇಶಿಸುವ ಕಾರಣ ಕರ್ನಾಟಕದಲ್ಲಿ ಮುಂಗಾರು ಮಳೆ ಪ್ರಾರಂಭ ಕೆಲವು ದಿನ ವಿಳಂಬವಾಗುವ ಸಾಧ್ಯತೆ ಇದೆ.
ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಕೆಲವು ಕಡೆಗಳಲ್ಲಿ ಜೂನ್ 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳ ಕರ್ನಾಟಕ, ಉತ್ತರ ಒಳ ಕರ್ನಾಟಕ ಹಾಗೂ ಕರಾವಳಿ ಕರ್ನಾಟಕದ ಭಾಗಗಳಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ.