ತುಮಕೂರು: ಶೀಘ್ರವೇ 15 ಸಾವಿರ ಕಾನ್ಸ್ಟೆಬಲ್ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕಾನ್ಸ್ಟೆಬಲ್ ನೇಮಕ ಪ್ರಕ್ರಿಯೆ ಶೀಘ್ರವೇ ಶುರುವಾಗಲಿದೆ.ಸಬ್ಇನ್ಸ್ಪೆಕ್ಟರ್ ನೇಮಕಾತಿ ಹಗರಣದ ತನಿಖೆ ಇನ್ನೂ ಮುಂದುವರಿದಿದೆ. 53 ಮಂದಿ ತಪ್ಪಿತಸ್ಥರು ಎಂಬುದು ಕಂಡು ಬಂದಿದೆ. ಆದರೆ, ಮರು ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಾನೂನು ತಜ್ಞರ ಸಲಹೆ ಪಡೆದು ಅರ್ಹರಿಗೆ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.