ದುಬೈ: ಇರಾನ್ ಸೇನಾ ಮುಖ್ಯಸ್ಥ ಸುಲೇಮಾನಿಯನ್ನು ಅಮೆರಿಕ ಕ್ಷಿಪಣಿ ದಾಳಿ ಮೂಲಕ ಹತ್ಯೆ ಮಾಡಿದ ನಂತರ ಅಮೆರಿಕ ಮತ್ತು ಇರಾನ್ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಅಮೆರಿಕ ದಾಳಿಗೆ ಪ್ರತಿ ದಾಳಿ ಇರಾನ್ ಬುಧವಾರ ಕ್ಷಿಪಣಿ ದಾಳಿ ನಡೆಸಿ ಅಮೆರಿಕದ 80 ಸೈನಿಕರನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದೆ.

ಈ ಕುರಿತು ಇರಾನ್ ಸರ್ಕಾರಿ ಮಾಧ್ಯದಲ್ಲಿ ಇರಾಕ್‍ನಲ್ಲಿದ್ದ ಅಮೆರಿಕ ಸೈನಿಕರನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದದ್ದು, ದಾಳಿಯಲ್ಲಿ 80 ‘ಅಮೆರಿಕ ಉಗ್ರರು’ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ. ಇರಾನ್ ಅಮೆರಿಕ ಸೈನಿಕರನ್ನು ಬದ್ಧ ವೈರಿಗಳಂತೆ ಕಾಣುತ್ತಿದ್ದು, ಅಮೆರಿಕ ಸೈನಿಕರನ್ನು ಉಗ್ರಗಾಮಿಗಳಿಗೆ ಹೋಲಿಕೆ ಮಾಡುತ್ತಿದೆ.
Iran has launched missile attacks on US forces in Iraq, in retaliation to the killing of General Qassem Soleimani. pic.twitter.com/oXFTYZPUdc
— Al Jazeera English (@AJEnglish) January 8, 2020
ತನ್ನ ಸೇನಾ ಕಮಾಂಡರ್ ಖಾಸಿಂ ಸುಲೇಮಾನಿ ಹತ್ಯೆಯ ಪ್ರತೀಕಾರ ತೀರಿಸುತ್ತೇವೆ ಎಂದು ಇರಾನ್ ಈಗಾಗಲೇ ಹೇಳಿತ್ತು. ಈ ಮೂಲಕ ಇದೀಗ ಪ್ರತಿದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. 15 ಕ್ಷಿಪಣಿಗಳನ್ನು ಇರಾನ್ ಅಮೆರಿಕ ಸೇನೆಯ ಮೇಲೆ ಹಾರಿಸಿದೆ. ನಮ್ಮ ಕ್ಷಿಪಣಿಯನ್ನು ಅಮೆರಿಕ ಹೊಡೆದು ಹಾಕಿಲ್ಲ ಎಂದು ಇರಾನ್ ಸರ್ಕಾರಿ ಮಾಧ್ಯಮ ಹೇಳಿಕೊಂಡಿದೆ.
ವಿಶ್ವಸಂಸ್ಥೆಯ 51ನೇ ಚಾರ್ಟರ್ ಅನ್ವಯ, ನಮ್ಮ ದೇಶದ ಪ್ರಜೆ ಮತ್ತು ಅಧಿಕಾರ ಮೇಲೆ ಹೀನ ದಾಳಿ ನಡೆಸಿದ್ದಕ್ಕೆ ಸ್ವಯಂ ರಕ್ಷಣೆಗಾಗಿ ಪ್ರತಿ ದಾಳಿ ನಡೆಸಲಾಗಿದೆ. ನಾವು ಯುದ್ಧವನ್ನು ಬಯಸುವುದಿಲ್ಲ. ಆದರೆ ನಮ್ಮ ಮೇಲೆ ಆಕ್ರಮಣ ಮಾಡಿದರೆ ಸುಮ್ಮನೆ ಇರಲ್ಲ.
-ಇರಾನ್ ವಿದೇಶಾಂಗ ಸಚಿವ ಜಾವದ್ ಜರೀಫ್
ಈ ಕೃತ್ಯಕ್ಕೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿ ಇರಾಕ್ ದೇಶದಲ್ಲಿರುವ ನಮ್ಮ ಎರಡು ನೆಲೆಗಳ ಮೇಲೆ ಇರಾನ್ ದಾಳಿ ನಡೆಸಿದೆ. ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬುದರ ಬಗ್ಗೆ ಮೌಲ್ಯಮಾಪನ ನಡೆಯುತ್ತಿದೆ. ವಿಶ್ವದಲ್ಲೇ ನಾವು ಬಲಿಷ್ಠವಾದ ಮಿಲಿಟರಿಯನ್ನು ಹೊಂದಿದ್ದು, ನಾಳೆ ಬೆಳಗ್ಗೆ ಹೇಳಿಕೆ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
All is well! Missiles launched from Iran at two military bases located in Iraq. Assessment of casualties & damages taking place now. So far, so good! We have the most powerful and well equipped military anywhere in the world, by far! I will be making a statement tomorrow morning.
— Donald J. Trump (@realDonaldTrump) January 8, 2020



