ದಾವಣಗೆರೆ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಿಂದ ಪ್ರತಿವರ್ಷದಂತೆ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಪ್ರತಿಭಾವಂತ ವಿದ್ಯಾರ್ಥಿಗಳು ಸವಿವರಗಳೊಂದಿಗೆ (ಇತ್ತೀಚಿನ ಒಂದು ಭಾವಚಿತ್ರದೃಢೀಕರಿಸಿದ ಅಂಕಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರ ಅರ್ಜಿಯನ್ನು ಮಹಾಸಭೆಯ www.veerashaivamahasabha.in ವೆಬ್ ಸೈಟ್ ನಲ್ಲಿ Online ಮೂಲಕ ದಿನಾಂಕ: 10-06-2023 ರಿಂದ 25-06-2023ರೊಳಗೆ ಸಲ್ಲಿಸುವುದು. Online ಮೂಲಕ ಬಂದಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು. ಅಂಚೆ, ಕೊರಿಯರ್ ಅಥವಾ ಖುದ್ದಾಗಿ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.
ಪ್ರತಿಭಾವಂತ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ನೆರವು ಪಡೆಯಬೇಕು ಎಂದು ಶಾಸಕ, ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕೋರಿದ್ದಾರೆ. ವಿಳಾಸ; ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ (ರಿ.)
ನಂ.17/1, ‘ವೀರಶೈವ-ಲಿಂಗಾಯತ ಭವನ’, ರಮಣಮಹರ್ಷಿ ರಸ್ತೆ, ಸದಾಶಿವನಗರ, ಬೆಂಗಳೂರು-560 080 ದೂ:080-23602177, e-mail:info@veerashaivamahasabha.com www.veerashaivamahasabha.org.



