ದಾವಣಗೆರೆ; ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ರಾಜ್ಯ ಹೆದ್ದಾರಿಯ ನುಗ್ಗಿಹಳ್ಳಿ ಬಳಿ ಬೀಕರ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದು, ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದ 22 ವರ್ಷದ ರವಿಕುಮಾರ್ ಸಾವನ್ನಪ್ಪಿದ್ದಾನೆ. ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದರಿಂದ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.