ಡಿವಿಜಿ ಸುದ್ದಿ, ದಾವಣಗೆರೆ: ವಾಲ್ಮೀಕಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು, ಇದೀಗ ಡಿಸಿಎಂ ಹುದ್ದೆ ತೆಗೆದರೆ ಸರ್ಕಾರದಲ್ಲಿರುವ ಗೊಂದಲ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.
ನಗರದಲ್ಲಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಹುದ್ದೆ ತೆಗೆಯಲು ನಮ್ಮದೇನೂ ವಿರೋಧವಿಲ್ಲ. ಒಂದು ವೇಳೆ ಡಿಸಿಎಂ ಹುದ್ದೆ ಮುಂದುವರಿಸಿದರೆ, ನಮ್ಮ ಸಮುದಾಯಕ್ಕೊಂದು ಅವಕಾಶ ನೀಡಬೇಕು ಎಂದರು.
ಬಿಜೆಪಿ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ವಾಲ್ಮೀಕಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡುವುದಾಗಿ ಮಾಧ್ಯಮಗಳಲ್ಲಿ ನೋಡಿದ್ದೇವೆ. ಅದರಲ್ಲೂ ವಾಲ್ಮೀಕಿ ಸಮಾಜ ರಾಜ್ಯದ ನಾಲ್ಕನೇ ಅತಿ ದೊಡ್ಡ ಸಮಾಜವಾಗಿದ್ದು, ನಮ್ಮ ಸಮುದಾಯದಿಂದ ರಮೇಶ್ ಜಾರಕಿಹೊಳಿ, ಶ್ರೀರಾಮುಲು ಡಿಸಿಎಂ ಹುದ್ದೆಗೆ ಪ್ರಬಲ ಆಕಾಂಕ್ಷಿಗಳಿದ್ದು, ಇಬ್ಬರಲ್ಲಿ ಒಬ್ಬರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.
ಡಿವಿಜಿ ಸುದ್ದಿ, ವಾಟ್ಸ್ ಆಪ್: 7483892205



