ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರ್ನಾಲ್ಕು ದಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಇಂದು (ಜುಲೈ 3) ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ .ಜುಲೈ 4ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಗೂ ಬೆಳಗಾವಿ, ಧಾರವಾಡ, ಹಾವೇರಿ, ತುಮಕೂರು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಜುಲೈ 5 ರಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಹಾಗೂ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗೆ ಯೆಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.



