ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರವು ಘೋಷಿಸಿರುವ ಗ್ಯಾರಂಟಿ ಯೋಜನೆ ಜಾರಿ ಮಾಡುವವರೆಗೂ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡುವವರೆಗೂ ಹೋರಾಟ ಮಾಡುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ಮುಂದುವರೆಯಲಿದೆ. ಸದನದ ಹೊರಗೆ, ಸದನದ ಒಳಗೂ ನಿರಂತರ ಹೋರಾಟ ನಡೆಸುತ್ತೇವೆ.ಪ್ರತಿಪಕ್ಷ ನಾಯಕನ ಆಯ್ಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಬಿ.ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕನ ಆಯ್ಕೆ ಇಂದು ಅಥವಾ ನಾಳೆ ಆಗಲಿದೆ. ಲಿಂಗಾಯತ ಸಮಾಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಯಾರು ಒತ್ತಾಯ ಮಾಡಿದ್ದಾರೋ ನನಗೆ ಗೊತ್ತಿಲ್ಲ. ಅದು ಅವರಿಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.