ದಾವಣಗೆರೆ; ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದಿಂದ ಜುಲೈ 13 ರಂದು ಬೆಳಗ್ಗೆ 10 ಗಂಟೆಗೆ ನೇರ ಆಯ್ಕೆ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ 51, ಜಿಲ್ಲಾಧಿಕಾರಿಗಳ ಕಚೇರಿ ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.
ಹಾವೇರಿಯ ಸುರ್ವೆ ಅಗ್ರಿಟೆಕ್ ಕಂಪನಿ ಸಂದರ್ಶನದಲ್ಲಿ ಭಾಗವಹಿಸುತ್ತಿದ್ದ, ಕಂಪನಿಯಲ್ಲಿ ಖಾಲಿ ಹುದ್ದೆಗಳಿಗೆ ಪಿಯುಸಿ, ಐಟಿಐ, ಡಿಪ್ಲೋಮಾ & ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 2 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ: 08192-259446, 63615 50016 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ಕೋರಿದ್ದಾರೆ.



