ಡಿವಿಜಿ ಸುದ್ದಿ, ಬೆಂಗಳೂರು: ಹಿರಿಯ ಸಂಶೋಧಕ, ವಿದ್ವಾಂಸ, ಸಾಹಿತಿ ಡಾ. ಎಂ. ಚಿದಾನಂದಮೂರ್ತಿ (88) ಅವರು ಶನಿವಾರ ಬೆಳಗಿನ ಜಾವ ನಿಧನರಾದರು. ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಶ್ವಾಸಕೋಶದ ಸೋಂಕು ನಿಯಂತ್ರಣಕ್ಕೆ ಬಾರದೆ ಶನಿವಾರ ಬೆಳಗ್ಗೆ 3 ಗಂಟೆಗೆ ನಿಧನರಾಗಿದ್ದಾರೆ. ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದಾರೆ. ಚಿದಾನಂದಮೂರ್ತಿ ಅವರು, ಮಗ ವಿನಯ್ ಕುಮಾರ್, ಮಗಳು ಶೋಭಾ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅವರು ಮೂಲತಃ ಚನ್ನಗಿರಿ ತಾಲ್ಲೂಕಿನ ಕೋಗಲೂ ಗ್ರಾಮದವರು.
ಹುಟ್ಟೂರಿಗೆ ತರುವಂತೆ ಆಗ್ರಹಿಸಿ ಪ್ರತಿಭಟನೆ

ಡಾ ಎಂ ಚಿದಾನಂದ ಮೂರ್ತಿ ರವರ ಪಾರ್ಥೀವ ಶರೀರವನ್ನು ಹುಟ್ಟೂರಾದ ಚನ್ನಗಿರಿ ತಾಲೂಕಿನ ಕೋಗಲೂರು ಗ್ರಾಮದಲ್ಲೆ ನಡೆಸಬೇಕೆಂದು ಒತ್ತಾಯಿಸಿ ಶಾಲಾ ಕಾಲೇಜು ವಿಧ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶ್ರೀ ವೀರಭದ್ರೇಶ್ವರ ಸ್ವಾಮಿಯ ದೇವಸ್ಥಾನದ ಮುಂದೆ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ವಿಜಯನಗರ ಸಮೀಪ ಹಂಪಿ ನಗರದ ಮೂರನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಿದಾನಂದಮೂರ್ತಿಯವರ ಆಸೆಯಂತೆ ಅವರ ದೇಹವನ್ನು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು. ಭಾನುವಾರು ಬೆಂಗಳೂರಿನ ಚಾಮರಾಜನಗರದ ವೀರಶೈವ ಚಿತಾರಾದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.
ಕನ್ನಡ ಭಾಷಾಶಾಸ್ತ್ರ, ವಚನ ಸಾಹಿತ್ಯ ಸಂಶೋಧನೆ ಮತ್ತು ಶಾಸನ ಶಾಸ್ತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಚಿದಾನಂದಮೂರ್ತಿ ಅವರು ವಿಜಯನಗರ ಸಾಮ್ರಾಜ್ಯ, ಹಂಪಿ ಪರಿಸರದ ಬಗ್ಗೆ ಸಂಶೋಧನೆಗಳನ್ನು ಮಾಡಿದ್ದರು.



