ದಾವಣಗೆರೆ: ತಡ ರಾತ್ರಿ ಕಾರಿನ ಟೈರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರ ವಲಯದ ಎಸ್.ಎಸ್ ಆಸ್ಪತ್ರೆ ಬಳಿ ನಡೆದಿದೆ.
ಸ್ಕೂಟರ್ನಲ್ಲಿದ್ದ ಶೋಭಾ(49) ಮೃತ ಮಹಿಳೆಯಾಗಿದ್ದಾರೆ. ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತ ಮಹಿಳೆಯ ಸಂಬಂಧಿಕರು ಎಸ್.ಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆ ಅವರಿಗೆ ಊಟ ತೆಗೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂರು ಕಾರುಗಳು, ಸ್ಕೂಟರ್ ಸಂಪೂರ್ಣ ಜಖಂ ಆಗಿದ್ದು, ದಾವಣಗೆರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



