Connect with us

Dvgsuddi Kannada | online news portal | Kannada news online

ಚನ್ನಗಿರಿ; ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ

IMG 20230719 150440

ದಾವಣಗೆರೆ

ಚನ್ನಗಿರಿ; ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ

ದಾವಣಗೆರೆ: ಕಳೆದ 15 ದಿನಗಳಿಂದ ಜಿಲ್ಲೆಯ ಚನ್ನಗಿರಿ ಜನರ ನಿದ್ದೆಗೆಡಿಸಿದ್ದ ಚಿರತೆ, ತಾಲೂಕಿನ ಗರಗ ಗ್ರಾಮದಲ್ಲಿ ಇಂದು ಬೆಳಿಗ್ಗೆ ಸೆರೆ ಸಿಕ್ಕಿದೆ. ಅರಣ್ಯ ಇಲಾಖೆಯಿಂದ ಇಡಲಾಗಿದ್ದ ಬೋನಿಗೆ ಬಿದ್ದಿದೆ.

ಕಳೆದ ಹದಿನೈದು ದಿನಗಳಿಂದ ಗ್ರಾಮದ ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ ಏಳು ಶ್ವಾನಗಳನ್ನು ಬಲಿ ಪಡೆದಿತ್ತು. ಇದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಜನರು ಒಂಟಿಯಾಗಿ ಓಡಾಡಲು ಭಯಪಡುವಂತಾಗಿತ್ತು. ಇದರಿಂದ ಗ್ರಾಮದ ಜನರು ಅರಣ್ಯ ಇಲಾಖೆಗೆ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.

ಚಿರತೆ ಹೆಜ್ಜೆ ಗುರುತು ಪತ್ತೆ ಮಾಡಿ ಬೋನು ಇಟ್ಟಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಬೋನಿನ ಒಳಗಡೆ ಶ್ವಾನ ಇರಿಸಿ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರೆ. ಚಿರತೆ ಸೆರೆ ಹಿನ್ನಲೆ ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆಯನ್ನ ಭದ್ರ ಅರಣ್ಯದಲ್ಲಿ ಬಿಡುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top